Saturday, September 12, 2026
spot_imgspot_img
spot_imgspot_img

ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟ; ಓರ್ವನಿಗೆ ಗಂಭೀರ ಗಾಯ..!

- Advertisement -
- Advertisement -

ಆನೇಕಲ್: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ನೆರಳೂರು ರಾಘವ ನಗರದ ಮುನಿರಾಜು ಬಡಾವಣೆಯ ದಿನೇಶ್ ದಾಸ್‌ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆ ಛಾವಣಿಯೇ ಚಿಂದಿ ಚಿಂದಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಅತ್ತಿಬೆಲೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!