- Advertisement -
- Advertisement -





ಬರ್ಲಿನ್: ಜರ್ಮನಿಯಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತೆಲಂಗಾಣದ ಜನಗಾಂವ್ ಜಿಲ್ಲೆಯ ಮಲ್ಕಾಪುರ್ ಗ್ರಾಮದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಅಪಾರ್ಟ್ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದ ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಹೊಸ ವರ್ಷದ ದಿನದಂದೇ ಈ ಅವಘಡ ಸಂಭವಿಸಿದ್ದು, ಮನೆಯವರು ದುಃಖಿತರಾಗಿದ್ದಾರೆ. ಹೃತಿಕ್ ವಿಶ್ವವಿದ್ಯಾಲಯದಲ್ಲಿ ಎಂಎಸ್ ಪದವಿ ಪಡೆಯಲು 2023 ರ ಜೂನ್‌ನಲ್ಲಿ ಜರ್ಮನಿಯ ಮ್ಯಾಗ್ಡೆಬರ್ಗ್‌ಗೆ ತೆರಳಿದ್ದರು. 2022 ರಲ್ಲಿ ವಾಗ್ದೇವಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನಿಂದ ಪದವಿ ಪಡೆದಿದ್ದರು. ಕುಂಟುಬಸ್ಥರು ಮೃತದೇಹವನ್ನು ಅಂತಿಮ ವಿಧಿವಿಧಾನಗಳಿಗಾಗಿ ತವರಿಗೆ ತರುವ ಪ್ರಕ್ರಿಯೆಯಲ್ಲಿದ್ದಾರೆ.
- Advertisement -








