Tuesday, September 8, 2026
spot_imgspot_img
spot_imgspot_img

ಘಾಜಿಯಾಬಾದ್‌: ನಿವೃತ್ತ ವಾಯುಪಡೆ ಅಧಿಕಾರಿಯನ್ನ ಗುಂಡಿಕ್ಕಿ ಹತ್ಯೆ!

- Advertisement -
- Advertisement -

ಭಾರತೀಯ ವಾಯುಪಡೆಯ (ಐಎಎಫ್) ನಿವೃತ್ತ ಸಿಬ್ಬಂದಿಯೊಬ್ಬರನ್ನು ಸ್ವಂತ ಮಕ್ಕಳೇ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ.ಕೊಲೆ ಮಾಡಿದ ಐದು ದಿನದ ನಂತರ ಈ ವಿಚಾರ ತಿಳಿದಿದೆ.

ಡಿಸೆಂಬರ್ 26 ರಂದು ಯೋಗೇಶ್ ಕುಮಾರ್ ನಿವಾಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು,ಆಸ್ತಿಗಾಗಿ ಮಕ್ಕಳೆ ಕೊಲೆಗೆ ಸುಪಾರಿ ನೀಡಿದ್ದಾರೆನ್ನಲಾಗಿದೆ. ಯೋಗೇಶ್ ಬೈಕಿನಲ್ಲಿ ಬರುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಎರಡು ಗುಂಡು ಹಾರಿಸಿ, ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಅವರ ಮಕ್ಕಳೇ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸಿದ್ದಾರೆ.

- Advertisement -

Related news

error: Content is protected !!