Saturday, May 4, 2024
spot_imgspot_img
spot_imgspot_img

ಅಪಾರ್ಟ್‍ಮೆಂಟ್‍ನ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

- Advertisement -G L Acharya panikkar
- Advertisement -

29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ.

ಬಾಲಕಿ ಅಪಾರ್ಟ್‍ಮೆಂಟ್‍ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್‌ವೇರ್‌ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್‍ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್‍ಮೆಂಟ್ ಅಸೋಸಿಯೇಷನ್‍ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!