Saturday, June 28, 2025
spot_imgspot_img
spot_imgspot_img

8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

- Advertisement -
- Advertisement -

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿ ಫ್ಲ್ಯಾಟ್‌ನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಹೈಪಾಯಿಂಟ್ ಹೈಟ್ಸ್ ಹೆಸರಿನ ಫ್ಲ್ಯಾಟ್ ನಲ್ಲಿ ನಡೆದಿದೆ.

ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಾಲಕಿ. ಮಣಿಪಾಲದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ, ಬಾಲಕಿ ಇತ್ತೀಚಿನ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ.

ಹೈಪಾಯಿಂಟ್ ಹೈಟ್ಸ್ ಫ್ಲ್ಯಾಟ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಎಂಟನೆ ಮಹಡಿಯಿಂದ ನೆಲಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಪೋಷಕರು ತಕ್ಷಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

- Advertisement -

Related news

error: Content is protected !!