Wednesday, August 5, 2026
spot_imgspot_img
spot_imgspot_img

6 ಜನರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಮೂವರು ಆರೋಪಿಗಳು ಅರೆಸ್ಟ್..!

- Advertisement -
- Advertisement -

ಕೋಲಾರ: ಬಾಲಕಿಯೊಬ್ಬಳ ಮೇಲೆ ನಿರಂತರ ಪ್ರತ್ಯೇಕವಾಗಿ 6 ಜನ ಅತ್ಯಾಚಾರವೆಸಗಿರುವುದು ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ರಾಹುಲ್, ನಾಗೇಶ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ. ಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಬಾಲಕಿ ನೀಡಿದ ಹೇಳಿಕೆ ಆಧರಿಸಿ ಆರು ಜನರ ವಿರುದ್ದ ಜು.18 ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!