Saturday, June 13, 2026
spot_imgspot_img
spot_imgspot_img

ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ರೈತ

- Advertisement -
- Advertisement -

ರೈತರೊಬ್ಬರು ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.

ಭಟ್ರೇನಹಳ್ಳಿ ರಾಜಣ್ಣ ಎಂಬ ರೈತ ಪಟ್ಟಣದ ಹಳೇ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಹಣ ಬಿಡಿಸಿಕೊಳ್ಳಲು ಹೋಗಿದ್ದರು.
ಎಟಿಎಂನಿಂದ ಹಣ ಡ್ರಾ ಮಾಡಲು ಬಾರದಿದ್ದಾಗ ಸ್ಥಳದಲ್ಲೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬರಿಗೆ ತನ್ನ ಎಟಿಎಂ ಕಾರ್ಡ್ ಕೊಟ್ಟು ಹಣ ತೆಗೆದು ಕೊಡುವಂತೆ ಕೋರಿಕೊಂಡಿದ್ದಾರೆ.

ಕೂಡಲೇ ಆತ 10 ಸಾವಿರ ರೂ. ನಗದು ಡ್ರಾ ಮಾಡಿಕೊಟ್ಟಿದ್ದು, ಬೇರೆ ಎಟಿಎಂ ಕಾರ್ಡ್ ಕೊಟ್ಟು ತೆರಳಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ರೈತ ರಾಜಣ್ಣ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ದೂರು ಕೊಡಲು ಹೋಗಿದ್ದಾರೆ.

ಈ ವೇಳೆ ಪೊಲೀಸರು ಸೂಚನೆ ಮೇರೆಗೆ ಕೆನರಾ ಬ್ಯಾಂಕಿಗೆ ಹೋಗಿ ಎಟಿಎಂ ಕಾರ್ಡ್ ಅನ್ನು ಸ್ಥಗಿತಗೊಳಿಸುವಷ್ಟರಲ್ಲಿ ಚಿನ್ನಾಭರಣ ಅಂಗಡಿಯಲ್ಲಿ ಎಟಿಎಂ ಕಾರ್ಡ್ ಬಳಸಿ ಬರೋಬ್ಬರಿ 40,500ರೂ. ಮೌಲ್ಯದ ಚಿನ್ನ ಖರೀದಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!