Sunday, June 14, 2026
spot_imgspot_img
spot_imgspot_img

ಗೋವಾ: ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

- Advertisement -
- Advertisement -

ಪಣಜಿ: ವಿದ್ಯಾರ್ಥಿಯೋರ್ವ ಹಾಸ್ಟೆಲ್ ರೂಮ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುರುವಾರ ದಕ್ಷಿಣ ಗೋವಾದ ಬಿಐಟಿಎಸ್ ಪಿಲಾನಿ ಕ್ಯಾಂಪಸ್‌ನಲ್ಲಿ ನಡೆದಿದೆ.

ರಿಷಿ ನಾಯರ್ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಗುರುವಾರ ಪೋಷಕರು ಮಾಡಿದ ಕರೆಗಳಿಗೆ ರಿಷಿ ಪ್ರತಿಕ್ರಿಯಿಸಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಹಾಸ್ಟೆಲ್ ಸಿಬ್ಬಂದಿಗೆ ಕರೆ ಮಾಡಿ ಪರಿಶೀಲಿಸುವಂತೆ ಹೇಳಿದ್ದರು. ಈ ವೇಳೆ ಹಾಸ್ಟೆಲ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ರಿಷಿ ಹಾಸಿಗೆ ಮೇಲೆ ಮಲಗಿದ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ರಿಷಿ, ಬಿಐಟಿಎಸ್ ಪಿಲಾನಿಯ ಹೈದರಾಬಾದ್ ಕ್ಯಾಂಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಅಲ್ಲಿ ಹೈದರಾಬಾದ್‌ನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಎರಡೂವರೆ ತಿಂಗಳ ಹಿಂದೆ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಳು. ಆಕೆಯ ಸಾವಿನಿಂದ ರಿಷಿ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ. ಇದೆಲ್ಲದರಿಂದ ಹೊರಬರಲು ಆತನನನ್ನು ಹೈದರಾಬಾದ್‌ನಿಂದ ಗೋವಾದ ಬಿಐಟಿಎಸ್ ಪಿಲಾನಿ ಕಾಲೇಜಿಗೆ ಸೇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಮರಣೋತ್ತರ ಪರೀಕ್ಷೆಯ ಬಳಿಕವೇ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಗೋವಾ ಸಿಎಂ ಪ್ರಮೋದ್ ಸಾವಂತ್ ಮಾತನಾಡಿ, ತನಿಖೆಗಾಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಇಂತಹ ಘಟನೆಗಳು ದುರದೃಷ್ಟಕರ ಮತ್ತು ಮತ್ತೆ ಸಂಭವಿಸಬಾರದು. ವರದಿಯನ್ನು ಸ್ವೀಕರಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!