Sunday, May 5, 2024
spot_imgspot_img
spot_imgspot_img

ಕಾಪು : ಲೈಟ್ ಹೌಸ್ ಮತ್ತು ಸಮುದ್ರಕ್ಕೆ ಇಳಿಯಲು ನಿಷೇಧ

- Advertisement -G L Acharya panikkar
- Advertisement -

ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ.  ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಪ್ರಯತ್ನಿಸುತ್ತಿರುವುದರಿಂದ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ.

ಈಗಾಗಲೇ ಸಮುದ್ರ ಎರಡು ಅಡಿಯಷ್ಟು ಆಳದವರೆಗಿನ ಮರಳನ್ನು ತನ್ನ ಒಡಲಿಗೆ ಎಳೆದುಕೊಂಡಿದ್ದು ಲೈಟ್ ಹೌಸ್ ಮತ್ತು ಸಮುದ್ರದ ನಡುವೆ ಒಂದೂವರೆ ಅಡಿಯಷ್ಟು ಆಳಕ್ಕೆ ಇಳಿದಿದೆ. ಇದರಿಂದಾಗಿ ಲೈಟ್‌ಹೌಸ್ ಹೋಗುವ ದಾರಿ ಬಂದ್ ಆಗಿದೆ. ಕಳೆದ ೩-೪ ದಿನಗಳಿಂದ ಲೈಟ್ ಹೌಸ್‌ಗೂ ಬೀಗ ಹಾಕಿದ್ದು, ಪ್ರವಾಸಿಗರಿಗೆ ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ.

- Advertisement -

Related news

error: Content is protected !!