Thursday, April 25, 2024
spot_imgspot_img
spot_imgspot_img

ಮಂಗಳೂರು: ಸಾಕ್ಸ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನಿಸಿದವ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -

ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯಿಂದ 24.44 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ಬಂಧಿತನನ್ನು ಕಾಸರಗೋಡಿನ ಅಬೂಬಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಐಎಕ್ಸ್ 384 ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿದ್ದ. ಆತನನ್ನು ಶೋಧಿಸಿದಾಗ ತಾನು ಧರಿಸಿದ್ದ ಸಾಕ್ಸ್ನಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದ. ಈತನಿಂದ 24.44 ಲಕ್ಷ ಮೌಲ್ಯದ 504 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!