Sunday, June 16, 2024
spot_imgspot_img
spot_imgspot_img

ಬಂಟ್ವಾಳ : ಬಿಸಿರೋಡ್‌ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು

- Advertisement -G L Acharya panikkar
- Advertisement -

ಬಂಟ್ವಾಳ: ಬಿ.ಸಿ ರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದ್ದು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಮತ್ತೆ ಇಂದು ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮನಡಿಗಲ್ ಆರ್ದಶ ನಗರ ನಿವಾಸಿ ಜಗದೀಶ ಅವರ ಪತ್ನಿ ಶಶಿಕಲಾ ಅವರು ಬಿ.ಸಿ ರೋಡಿನಿಂದ ಬೆಳ್ತಂಗಡಿಗೆ ಪ್ರಯಾಣಿಸುವುದಕ್ಕೆ ಬಸ್ ಹತ್ತುವ ವೇಳೆ ಬ್ಯಾಗ್ ನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾಗಿದೆ.

ಮಗುವಿನ ಜೊತೆ ಗಂಡ ಬಸ್ ಹತ್ತಿದ್ದು, ಅವರ ಹಿಂದೆ ಶಶಿಕಲಾ ಅವರು ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಬ್ಯಾಗ್ ನೊಳಗಿದ್ದ ಚಿನ್ನದ ಪಾಕೆಟ್ ನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬೆಳ್ತಂಗಡಿ ಧರ್ಮಸ್ಥಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುವ ಸಮಯ 10:30 ಗಂಟೆಗೆ ಬ್ಯಾಗ್ನಲ್ಲಿದ್ದ ಸುಮಾರು 45 ಗ್ರಾಂ ವಿವಿಧ ಶೈಲಿಯ ಮತ್ತು ವಿವಿಧ ಮಾದರಿಯ ಹಳೆಯ ಚಿನ್ನಾಭರಣಗಳು ಕಾಣೆಯಾಗಿದೆ ಸುಮಾರು 2 ಲಕ್ಷ ಮೌಲ್ಯದ ಚಿನ್ನ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ, ಅ.ಕ್ರ: 91/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!