Monday, October 5, 2026
spot_imgspot_img
spot_imgspot_img

ಕರ್ನಾಟಕ ಕ್ರೀಡಾಪಟುಗಳಿಗೆ ಸಿಹಿ ಸುದ್ದಿ-ಸರ್ಕಾರಿ ಹುದ್ದೆಗಳಲ್ಲಿ ಶೇ.2 ಮೀಸಲಾತಿ ಆದೇಶ ಪ್ರಕಟ

- Advertisement -
- Advertisement -

ಬೆಂಗಳೂರು: ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ ಕಳೆದ ನಾಲ್ಕು ವರ್ಷಗಳ ಪ್ರಯತ್ನದ ಫಲವಾಗಿ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ರಷ್ಟು ಮೀಸಲಾತಿ, ಅರಣ್ಯ ಮತ್ತು ಪೊಲೀಸ್‌ ಇಲಾಖೆಗಳಲ್ಲಿ ಶೇ.3 ರಷ್ಟು ಮೀಸಲಾತಿ ಆದೇಶವನ್ನು ಸರ್ಕಾರ ಸೋಮವಾರ ಪ್ರಕಟಿಸಿದೆ.

ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮಗಳು, 2026 ಕ್ಕೆ ಸಂಪುಟ ಸಭೆ ಅನುಮೋದನೆ ನೀಡಲಾಗಿತ್ತು. ಇದೀಗ ಮೀಸಲಾತಿ ಆದೇಶವನ್ನು ಸರ್ಕಾರ ಪ್ರಕಟಿಸಿದೆ. ಇದರಿಂದ ರಾಜ್ಯದ ಕ್ರೀಡಾಪಟುಗಳು ಕೆಒಎ ಕಾರ್ಯಕ್ಕೆ ಧನ್ಯವಾದ ಅರ್ಪಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಸರ್ಕಾರದ ಆದೇಶವನ್ನು ಫಿಬಾ ಅಧ್ಯಕ್ಷರು, ಕೆಒಎ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಡಾ.ಕೆ.ಗೋವಿಂದರಾಜ್‌ ಸ್ವಾಗತಿಸಿದ್ದಾರೆ. ಇದಕ್ಕೆ ಪ್ರಮುಖ ಪಾತ್ರವಹಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರೂ ಡಾ.ಜಿ.ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಅಧಿಕಾರಿ ವರ್ಗದವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಪ್ರಯತ್ನಕ್ಕೆ ಇಂದು ಫಲ ಸಿಕ್ಕಿದೆ. ಕರ್ನಾಟಕ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸಿಗಬೇಕು ಎಂಬುದು ನನ್ನ ಕನಸಾಗಿತ್ತು. ಇದೀಗ ಸರ್ಕಾರ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇಕಡಾ 2 ರಷ್ಟು ಮೀಸಲಾತಿ ಆದೇಶವನ್ನು ಪ್ರಕಟಿಸುವ ಮೂಲಕ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಅರಣ್ಯ ಹಾಗೂ ಪೊಲೀಸ್ ಇಲಾಖೆಗಳಲ್ಲಿ ಶೇಕಡ 3ರಷ್ಟು ಮೀಸಲಾತಿ‌ ಪ್ರಕಟಿಸಿದ್ದು, ಸರ್ಕಾರಕ್ಕೆ ಧನ್ಯವಾದ ಹೇಳಬಯಸುತ್ತೇನೆ ಡಾ. ಕೆ.ಗೋವಿಂದರಾಜ್‌ ಎಂದಿದ್ದಾರೆ.

- Advertisement -

Related news

error: Content is protected !!