Saturday, June 28, 2025
spot_imgspot_img
spot_imgspot_img

ಗೂಡ್ಸ್‌ ವಾಹನ ಡಿಕ್ಕಿ; ಮಕ್ಕಳಿಬ್ಬರು ದಾರುಣ ಸಾವು

- Advertisement -
- Advertisement -

ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳಲ್ಲಿ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ.

ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳನ್ನು ರಾಮನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ರೋಹಿತ್ (5), ಶಾಲಿನಿ (8) ಮೃತಪಟ್ಟಿದ್ದಾರೆ. ಉಳಿದ ಸುಚಿತ್, ಗೌತಮಿ, ಲೇಖನಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಮಕ್ಕಳಿಗೆ ಅಪಘಾತ ನಡೆಸಿ ಎಸ್ಕೇಪ್ ಆಗಿದ್ದ ಗೂಡ್ಸ್ ವಾಹನ ಚಾಲಕ ತನ್ನ ವಾಹನವನ್ನ ಬೇರೆಡೆ ನಿಲ್ಲಿಸಿ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!