ದ.ಕ.ಜಿಲ್ಲೆಯಲ್ಲಿ ಕೆಂಪು ಕಲ್ಲು- ಮರಳುಗಾರಿಕೆ ವಿಚಾರದಲ್ಲಿ ಸರಳವಾದ ನಿಯಮ ಮಾಡುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸುವಂತೆ ರಮನಾಥ್ ರೈ ಮನವಿ



ಬೆಂಗಳೂರು- ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಪೆಷಲ್ ಇನ್ವಷ್ಟಿಕೇಷನ್ ಟೀಮ್ ಇದನ್ನು ಸ್ಥಾಪಿಸುವ ಮೂಲಕ ಜಿಲ್ಲೆಯಲ್ಲಿ ಸೌಹಾರ್ದ ವಾತವಾರಣ ನಿರ್ಮಿಸುವ ಸಲುವಾಗಿ ಈ ಕಾರ್ಯವನ್ನು ದ.ಕ.ಜಿಲ್ಲೆಯಲ್ಲಿ ಸ್ಥಾಪಿಸಿದ್ದಾರೆ ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಬಿ ರಮನಾಥ್ ರೈ ಅವರು ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಜೊತೆಗೆ ದ.ಕ.ಜಿಲ್ಲೆಯಲ್ಲಿ ತಲೆದೂರಿರುವ ಜಟಿಲವಾಗಿರುವ ಕೆಂಪು ಕಲ್ಲು- ಮರಳಿನ ವಿಚಾರದಲ್ಲಿ ಸರಳವಾದ ರೀತಿಯ ಕಾನೂನು ಮಾಡುವ ಮೂಲಕ ಜಿಲ್ಲೆಯ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರಿಗೆ ರಮನಾಥ್ ರೈ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ನಗರಾಭಿವೃದ್ಧಿ ಯೋಜನೆಯ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಪಿಯೋಷ್ ಎಲ್ ರೊಡ್ರಿಗೇಶ್, ಬಂಟ್ವಾಳ ಪುರಸಭಾ ಸದಸ್ಯ ಶರೀಫ್, ಯುವ ನಾಯಕ ಶಬೀರ್ ಸಿದ್ದಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.