- Advertisement -
- Advertisement -



ವಿಟ್ಲ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ವಿ ಕೆ ಎಂ ಅಶ್ರಫ್ ರವರು ನೇಮಕವಾಗಿದ್ದಾರೆ.
ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಡಾ.ರಾಜಾರಾಮ್ ಕೆ.ಬಿ ಮತ್ತು ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್ ರವರ ಶಿಫಾರಸ್ಸಿನ ಮೇರೆಗೆ ಹಾಗೂ ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೊಲ್ಯ ಶ್ರೀನಿವಾಸ್ ಶೆಟ್ಟಿ ಯವರ ಮನವಿಯಂತೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ನೇಮಿಸಿ ಅದೇಶಿಸಿದ್ದಾರೆ.
ಇವರು ವಿಟ್ಲ ಪಟ್ಟಣ ಪಂಚಾಯಿತಿಯ ಎರಡು ಬಾರಿ ಸದಸ್ಯರಾಗಿಯೂ,ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾಗಿಯೂ, ನಗರ ಕಾಂಗ್ರೆಸ್ ವಕ್ತಾರರಾಗಿಯೂ, ಜಿಲ್ಲಾ ಅಲ್ಪಸಂಖ್ಯಾತ ಘಟಕ ಪ್ರದಾನ ಕಾರ್ಯದರ್ಶಿಯಾಗಿ ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಯೋಜಕರಾಗಿದ್ದಾರೆ,ಧಾರ್ಮಿಕ,ಶೈಕ್ಷಣಿಕ, ಸಾಮಾಜಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಜನಪ್ರಿಯತೆ ಗಳಿಸಿದ್ದಾರೆ.
- Advertisement -








