Tuesday, July 21, 2026
spot_imgspot_img
spot_imgspot_img

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ..!

- Advertisement -
- Advertisement -

ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.

ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್​ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.

ಏಕಪರದೆ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾಗಳ ಟಿಕೆಟ್ ಬೆಲೆ ದುಬಾರಿ ಆಗಿರುತ್ತದೆ. ಆ ಕಾರಣದಿಂದಲೇ ಜನರು ಚಿತ್ರಮಂದಿರಗಳಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಹಾಗಾಗಿ ಸಿನಿಮಾಗಳ ಟಿಕೆಟ್ ಬೆಲೆ ತಗ್ಗಿಸಬೇಕು ಎಂದು ಹೇಳಲಾಗುತ್ತಿತ್ತು. ಅದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ.

2025-26ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು. ಮಲ್ಟಿಪ್ಲೆಕ್ಸ್​ಗಳಲ್ಲಿ ಎಗ್ಗಿಲ್ಲದೇ ಏರಿಕೆ ಆಗುತ್ತಿದ್ದ ಟಿಕೆಟ್ ಬೆಲೆಗೆ ಕಡಿವಾಳ ಹಾಕಲು ಸರ್ಕಾರ ಮುಂದಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಇನ್ಮುಂದೆ ಪ್ರೇಕ್ಷಕರಿಗೆ ಟಿಕೆಟ್ ಬೆಲೆಯ ಹೊರೆ ಕಡಿಮೆ ಆಗಲಿದೆ.

- Advertisement -

Related news

error: Content is protected !!