Saturday, June 28, 2025
spot_imgspot_img
spot_imgspot_img

ಸರ್ಕಾರಿ ಬಸ್- ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ..!

- Advertisement -
- Advertisement -

ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಾಳದ ಕಿರುಸೇತುವೆ ಬಳಿ ನಡೆದಿದೆ.

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!