Saturday, April 27, 2024
spot_imgspot_img
spot_imgspot_img

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ – ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

- Advertisement -G L Acharya panikkar
- Advertisement -

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಜಾಮೀನು ಕೋರಿ 6 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಆರ್‌.ಆರ್‌ ನಗರದ ಐಡಿಯಲ್ ಹೋಮ್ಸ್ ಟೌನ್‌ಶಿಪ್‌ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು, 16 ಆರೋಪಿಗಳನ್ನು ಬಂಧಿಸಿದ್ದರು. ಈಗ ಇವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆರೋಪಿಗಳ ಪೈಕಿ ಅಮಿತ್ ದೇಗ್ವೇಕರ್, ಭರತ್ ಕುರ್ನೆ, ಸುಧನ್ವಾ ಗೊಂಧಲೇಕರ್, ಸುಜಿತ್‌ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ್ ಯಡವೆ ಹಾಗೂ ರಾಜೇಶ್ ಬಂಗೇರ್‌ ಜಾಮೀನು ಕೋರಿ ತಮ್ಮ ವಕೀಲರ ಮೂಲಕ 2020 ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೂ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದೆ.

- Advertisement -

Related news

error: Content is protected !!