Saturday, June 28, 2025
spot_imgspot_img
spot_imgspot_img

ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

- Advertisement -
- Advertisement -

ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ.

ಚಾಮರಾಜನಗರ ತಾಲೂಕಿನ ಗ್ರಾಮದ ಯುವಕ ರಂಗಸ್ವಾಮಿ (21) ಶಿಕ್ಷೆಗೊಳಗಾದ ಅಪರಾಧಿ. 15 ವರ್ಷದ ತನ್ನ ದೊಡ್ಡಪ್ಪನ ಮಗಳನ್ನೇ ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದನು.

ಈ ಸಂಬಂಧ 2020 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಚಾರ್ಚ್‍ಶೀಟ್ ಸಲ್ಲಿಕೆಯಾಗಿತ್ತು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 4 ಲಕ್ಷ ಪರಿಹಾರ ಕೊಡಬೇಕೆಂದು ನ್ಯಾಯಾಧೀಶರು ನಿರ್ದೇಶನ ಕೊಟ್ಟಿದ್ದಾರೆ.

- Advertisement -

Related news

error: Content is protected !!