Wednesday, June 10, 2026
spot_imgspot_img
spot_imgspot_img

ರಾಜ್ಯದಲ್ಲಿ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರು ಡಿಲೀಟ್

- Advertisement -
- Advertisement -

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿದೆ.

ಮೃತಪಟ್ಟವರ ಅಕೌಂಟ್‌ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪರಿಷ್ಕರಣೆ ಮಾಡಲು ನಿರ್ಧರಿಸಿತ್ತು. ಅದರಂತೆ ಗ್ರಾಮ ಪಂಚಾಯಿತಿವಾರು ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಿದ್ದರು.

ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 2,8,030 ಮಹಿಳೆಯರು ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 6,624 ಮೃತರ ಖಾತೆಗೆ ಯೋಜನೆಯ ಹಣ ಜಮೆಯಾಗಿದೆ. ಜೊತೆಗೆ ಐಟಿ-ಜಿಎಸ್‌ಟಿ ಪಾವತಿಸುತ್ತಿರುವ 4,800 ಫಲಾನುಭವಿಗಳು ಪತ್ತೆಯಾಗಿದ್ದಾರೆ. ಈ ಜಿಲ್ಲೆಯಲ್ಲಿ ಒಟ್ಟು 12,719 ಗೃಹಲಕ್ಷ್ಮಿಯರ ಹೆಸರು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!