Thursday, June 4, 2026
spot_imgspot_img
spot_imgspot_img

ಪಂಚೆ ಉಟ್ಟು ಮಾಲ್‌ಗೆ ಬಂದಿದ್ದ ಅನ್ನದಾತನಿಗೆ ಅವಮಾನ ಮಾಡಿದ ಜಿ ಟಿ ಮಾಲ್ 7 ದಿನ ಬಂದ್

- Advertisement -
- Advertisement -

ಹಾವೇರಿ ಮೂಲದ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಪಂಚೆ ಧರಿಸಿ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡದೆ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಜಿ ಟಿ ಮಾಲ್ ಗೆ 7 ದಿನ ಬೀಗ ಜಡಿಯಲು ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ.‌

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಕಾನೂನಿನಲ್ಲಿ ಶಿಕ್ಷೆಗೆ ಅವಕಾಶವಿರುವುದರಿಂದ ಮಾಲ್‌ ಅನ್ನು 7 ದಿನ ಬಂದ್‌ ಮಾಡಲು ಯೋಚಿಸಿದ್ದೇವೆ ಎಂದರು.

ಸದನದಲ್ಲಿ ಜಿ.ಟಿ ಮಾಲ್ ನಲ್ಲಿ ರೈತನಿಗೆ ಅವಮಾನ ಆದ ವಿಚಾರ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಸ್ಪೀಕರ್ ಯು.ಟಿ.ಖಾದರ್ ಗರಂ ಆದರು.

ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.

ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡ್ತಾರೆ, ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡ್ತಾರೆ. ಆದರೆ, ಬೇರೆಯವರಿಗೆ ಆ ರೂಲ್ಸ್ ಇಲ್ವಾ ಎಂದು ಸಚಿವ ಬೈರತಿ ಸುರೇಶ್ ಪ್ರಶ್ನಿಸಿದರು. ಅಲ್ಲದೆ, ಸಚಿವ ಬೈರತಿ ಸುರೇಶ್, 7 ದಿನಗಳ ಕಾಲ‌ ಮಾಲ್ ಮುಚ್ಚಿಸುತ್ತೇವೆ ಎಂದರು.

ಈ ಘಟನೆ ಮೊನ್ನೆ ಮಂಗಳವಾರ ನಡೆದಿದ್ದು ಸುದ್ದಿ ಮಾಧ್ಯಮಗಳಲ್ಲಿ ಇದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.

- Advertisement -

Related news

error: Content is protected !!