- Advertisement -
- Advertisement -
ಮಂಗಳೂರು : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ನಡೆದಿದೆ.
ಮಂಗಳೂರಿನ ಕೈಕಂಬ ಬಾಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದಿದ್ದು ಹಲವು ಮನೆಗಳ ಮೇಲೆ ಬೀಳುತ್ತಿದೆ. ಹಲವು ಮನೆ,ಕುಟುಂಬ ಅಪಾಯದಲ್ಲಿದೆ ಎಂದು ಹೇಳಲಾಗಿದ. ಈಗಾಗಲೇ ನಾಲ್ಕು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದ್ದು, ಇನ್ನೂ ಎಂಟು ಮನೆಗಳು ಅಪಾಯದಲ್ಲಿದೆ ಎಂದು ಹೇಳಲಾಗಿದೆ. ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು ಸ್ಥಳೀಯರು ಮಣ್ಣು ತೆರವು ಗೊಳಿಸುತ್ತಿದ್ದಾರೆ. ಮಣ್ಣಿನ ಸಿಲುಕಿರುವವರ ಹೊರತೆಗೆಯಲು ಪ್ರಯತ್ನಿಸುತ್ತಿದ್ದಾರೆ.
- Advertisement -