Tuesday, May 14, 2024
spot_imgspot_img
spot_imgspot_img

ಕಡಬ: ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಗೆ ಕಾಡಾನೆ ದಾಳಿ; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸೇಫ್

- Advertisement -G L Acharya panikkar
- Advertisement -

ಕಡಬ: ಬೆಂಗಳೂರಿಗೆ ತೆರಳುತ್ತಿದ್ದ KSTRC ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ನಡೆದಿದೆ. ಇದರಿಂದ ಬಸ್ ಗೆ ಹಾನಿಯಾಗಿದೆ. ಈ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ಬಸ್ಸು ಚಾಲಕ ತಪ್ಪಿಸಲು ಯತ್ನಿಸಿದ್ದಾರೆ. ಕೆರಳಿದ ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ‌. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!