Sunday, June 7, 2026
spot_imgspot_img
spot_imgspot_img

11 ಸಾವಿರ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

- Advertisement -
- Advertisement -

ಬೆಂಗಳೂರು : ರಾಜ್ಯ ಸರಕಾರವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದ್ದು, ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರಿಗೆ ವಹಿಸಿ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಶೇ.100ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಬೇಕು. ಸರಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ತಿಳಿಸಿದೆ.

ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ, ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಲ್ಲಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಅದೇ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡಬೇಕು ಎಂದು ತಿಳಿಸಿದೆ.

- Advertisement -

Related news

error: Content is protected !!