Thursday, March 28, 2024
spot_imgspot_img
spot_imgspot_img

ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ನಿಧನ

- Advertisement -G L Acharya panikkar
- Advertisement -

ಗಾಂಧೀನಗರ(ಅ.29): ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ನಿಧನಹೊಂದಿದ್ದಾರೆ. ಅವರಿಗೆ 92 ವರ್ಷ ಪ್ರಾಯವಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಅಹ್ಮದಾಬಾದ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರು ಎಳೆದಿದ್ದಾರೆ.

ಎರಡು ಬಾರಿ ಕೇಶು ಭಾಯಿ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. 1998ರಿಂದ 2001ರ ವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆರು ಬಾರಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದರು. 2012ರಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ್ದ ಕೇಶು ಭಾಯಿ ಪಟೇಲ್ , ಗುಜರಾತ್ ಪರಿವರ್ತನಾ ಪಕ್ಷ ಎಂಬ ಪ್ರಾದೇಶಿಕ ಪಕ್ಷ ಕಟ್ಟಿದ್ದರು.

ಕೇಶುಭಾಯಿ ಪಟೇಲ್ ನಿಧನಕ್ಕೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಅವರ ಕೊಡುಗೆ ಅಪಾರ ಎಂದು ರಾಜ್ ನಾಥ್ ಸಿಂಗ್ ಹೇಳಿದ್ದಾರೆ.

- Advertisement -

Related news

error: Content is protected !!