




ಗುಂಡ್ಯ: ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯಲೆನ್ಸ್‌ನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಅಂಬ್ಯುಲೈನ್ಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಕಾರ್ಕಳ ನಿವಾಸಿ ಶೋದನ್ (22) ಎಂದು ಗುರುತಿಸಲಾಗಿದೆ.
ಕಡಬ ಶಿರಾಡಿ ನಿವಾಸಿ ಸುರೇಶ್ (46)ಎಂಬವರ ದೂರಿನಂತೆ ಅಂಬ್ಯಲೆನ್ಸ್ ವಾಹನ ನಂಬ್ರ: KA-19-C-7557ನೇಯದರಲ್ಲಿ ಚಾಲಕರಾಗಿದ್ದು, ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ ಲಾಕ್ ಮಾಡಿ ಮನೆಗೆ ಹೋಗುತ್ತಿರುತ್ತಾರೆ. ಅದರಂತೆ ಡಿ.19ರಂದು ರಾತ್ರಿ ಕೂಡಾ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಅಂಬ್ಯಲೆನ್ದ್ ಕೀಯನ್ನು ಅಂಬ್ಯುಲೆನ್ದ್‌ನಲ್ಲಿ ಇಟ್ಟು ಹೋಗಿರುತ್ತಾರೆ. ಮರುದಿನ ಡಿ.20ರಂದು ಬೆಳಿಗ್ಗೆ, ಮನೆಯಿಂದ ಬಂದು ಅಂಬ್ಯುಲೆನ್ಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ ಅಂಬ್ಯುಲೆನ್ಸ್ ಕಳವಾಗಿರುತ್ತದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2025 ಕಲಂ: 303(2) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಡಿ.20ರಂದು ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿ ಉಡುಪಿ ಕಾರ್ಕಳ ನಿವಾಸಿ ಶೋದನ್ ಎಂಬಾತನನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾನ್ಯ ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದ್ದು, ಕಳವಾಗಿದ್ದ ಅಂಬ್ಯುಲೈನ್ಸ್‌ನ್ನು ವಶಪಡಿಸಿಕೊಳ್ಳಲಾಯಿತು.








