- Advertisement -
- Advertisement -





ಗುಂಡ್ಯ: ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ ಹಾಗೂ ಸರಕು ಸಾಗಣೆ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಜಾವ ನಡೆದಿದೆ
ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
- Advertisement -








