- Advertisement -
- Advertisement -





ಗುರುವಾಯನಕೆರೆ: ಪುತ್ತೂರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ರಸ್ತೆ ಬದಿಯಲ್ಲಿರುವ ಅಬ್ದುಲ್ ರಹ್ಮಾನ್ ಎಂಬವರ ಮನೆಯ ಅಂಗಳಕ್ಕೆ ನುಗ್ಗಿ ನಿಂತ ಘಟನೆ ಇಂದು(ಸೆ.07) ನಡೆದಿದೆ.
ಬಸ್‌ನಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ತುಂಬಿಕೊಂಡಿದ್ದರು ಎನ್ನಲಾಗಿದೆ. ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಚಲಿಸಿ ನೇರವಾಗಿ ಮನೆಯ ಅಂಗಳಕ್ಕೆ ನುಗ್ಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ, ದೊಡ್ಡ ಅನಾಹುತ ತಪ್ಪಿದೆ. ಮನೆಯ ಅಂಗಳ ಹಾಗೂ ಬಸ್‌ಗೆ ಉಂಟಾದ ಹಾನಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -








