Friday, May 3, 2024
spot_imgspot_img
spot_imgspot_img

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಂಧು ನೇಮಕ

- Advertisement -G L Acharya panikkar
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿಯು ಕೇಂದ್ರ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ನೇಮಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರಿರುವ ಆಯ್ಕೆ ಸಮಿತಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ಚುನಾವಣಾ ಆಯುಕ್ತರ ನೇಮಕದ ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಆಯ್ಕೆ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, “ಸುಖಬೀರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲು 212 ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಇವರಲ್ಲಿ ಇಬ್ಬರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಸುಖಬೀ‌ರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅವರು ಐಎಎಸ್‌ ನಿವೃತ್ತ ಅಧಿಕಾರಿಗಳಾಗಿದ್ದಾರೆ. ಸುಖಬೀರ್ ಸಂಧು ಅವರು ಪಂಜಾಬ್‌ನವರಾದರೆ, ಜ್ಞಾನೇಶ್ ಕುಮಾ‌ರ್ ಅವರು ಕೇರಳದವರು ಎಂದು ತಿಳಿದುಬಂದಿದೆ. ಖಾಲಿ ಇರುವ ಎರಡು ಹುದ್ದೆಗಳಿಗೆ ಈಗ ಆಯುಕ್ತರನ್ನು ನೇಮಕ ಮಾಡಿದ ಕಾರಣ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಾಗತ್ತದೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!