Saturday, June 28, 2025
spot_imgspot_img
spot_imgspot_img

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

- Advertisement -
- Advertisement -

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ ಎಂದು ಹೇಳಿದರು.

1988 ರ ಬ್ಯಾಚ್‌ನ ಕೇರಳ ಕೇಡರ್‌ನ ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿರುವ ಜ್ಞಾನೇಶ್ ಕುಮಾರ್, ಜನವರಿ 31, 2024 ರಂದು ಕೇಂದ್ರ ಸಹಕಾರ ಕಾರ್ಯದರ್ಶಿಯಾಗಿ ನಿವೃತ್ತರಾದರು. ಮಾರ್ಚ್ 14, 2024 ರಂದು ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಯಿತು.

- Advertisement -

Related news

error: Content is protected !!