Friday, August 14, 2026
spot_imgspot_img
spot_imgspot_img

ಜಿಮ್ ತರಬೇತುದಾರನಿಗೆ ಹಲ್ಲೆ ವಿಚಾರ-ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ: ಯುವತಿಯ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ಕೂಲಂಕುಷ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಯುವತಿ ಮತ್ತು ಆಕೆಯ ತಾಯಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ. ಮತ್ತೊಂದೆಡೆ ಸಮೀರ್ ಕುಟುಂಬದವರು ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು.

ಮೂರು ದೂರುಗಳನ್ನೂ ಸಮಗ್ರವಾಗಿ ಪರಿಶೀಲಿಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ. ಘಟನೆಯ ವಿಡಿಯೋವನ್ನು ಯಾರು ಚಿತ್ರೀಕರಿಸಿದ್ದಾರೆ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಹೇಳಿದರು. ಸಮೀರ್ ಸಹೋದರಿ ತೈಸಿನ್ ಸೇರಿದಂತೆ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪವೂ ಕೇಳಿಬಂದಿದ್ದು, ಈ ಕುರಿತು ಯುವತಿ ಹೇಳಿಕೆ ನೀಡಿದ್ದಾಳೆ. ಈ ಆರೋಪಗಳನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಪ್ರಕರಣದ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -

Related news

error: Content is protected !!