Tuesday, June 9, 2026
spot_imgspot_img
spot_imgspot_img

ಗ್ಯಾಸ್ ಕಟರ್​ನಿಂದ ಎಟಿಎಂ ಮಷೀನ್ ಕೊರೆದು ಲಕ್ಷಾಂತರ ರೂ. ದೋಚಿದ ಕಳ್ಳರು

- Advertisement -
- Advertisement -

ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಕೊರೆದು 20 ಲಕ್ಷ ರೂ.ಗೂ ಹೆಚ್ಚಿನ ಹಣ ದೋಚಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಎಸ್‌ಬಿಐ ಎಟಿಂನಲ್ಲಿದ್ದ ಅಂದಾಜು 23 ಲಕ್ಷಕ್ಕೂ ಅಧಿಕ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎಟಿಎಂನಲ್ಲಿ ಒಟ್ಟು ಎಷ್ಟು ಹಣ ಇತ್ತು ಎಂಬ ಬಗ್ಗೆ ಬ್ಯಾಂಕ್ ಸಿಬ್ಬಂದಿ ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದಾದ ಬಳಿಕ ನಗರದ ಇಂಡಿಯನ್ ಓವರ್‌ಸಿಸ್ ಬ್ಯಾಂಕ್‍ನ ಎಟಿಎಂ ದೋಚಲು ಯತ್ನಿಸಿದ್ದಾರೆ. ಹಣ ತೆಗೆಯಲು ಸಾಧ್ಯವಾಗದ ಕಾರಣ ಅಲ್ಲಿಂದ ವಾಪಾಸ್ ಆಗಿದ್ದಾರೆ.ಕಳ್ಳತನವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಫ್‍ಎಸ್‍ಎಲ್ ಸಿಬ್ಬಂದಿ ಕೂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಕಾರಿನಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!