Thursday, September 3, 2026
spot_imgspot_img
spot_imgspot_img

ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ಶಾಸಕರ ವಿರುದ್ಧ ಪ್ರೆಸ್ ಮೀಟ್ ಮಾಡಲು ಬಂದ ಹಕೀಂ ಕೂರ್ನಡ್ಕ

- Advertisement -
- Advertisement -

ಜೀವಬೆದರಿಕೆಯೊಡ್ಡಿ ಅಕ್ರಮವಾಗಿ ತಡೆದ ಆರೋಪ; ಹಲವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಬಂದಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತನಿಗೆ ಕೆಲವರು ತಳ್ಳಾಟ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಘಟನೆ ಸೆ. 1ರಂದು ನಡೆದಿದೆ.

ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಅವರು ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ದೂರಿನ ಪ್ರಕಾರ, ಅಬ್ದುಲ್ ಹಕೀಂ ಅವರು ತಮ್ಮ ವಿರುದ್ಧ ಮಾಡಲಾಗಿರುವ ಕೆಲವು ಆರೋಪಗಳ ಸ್ಪಷ್ಟನೆ ನೀಡುವ ಸಲುವಾಗಿ ಸೆ. 1ರಂದು ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಲು ಪುತ್ತೂರಿನ ಪ್ರೆಸ್ ಕ್ಲಬ್‌ಗೆ ಆಗಮಿಸಿದ್ದರು. ಈ ವೇಳೆ ಉದಯ ಪಾಟಾಳಿ, ಜುನೈದ್ ಬಿಜಿ, ಇಸಾಕ್ ಸಾಲ್ಮರ, ಬಶೀರ್ ಪರ್ಲಡ್ಕ, ಹಕೀಂ ಬೋಳ್ವಾರು, ಮೋನು ಬಪ್ಪಳಿಗೆ, ನಾಶಿರ್ ಕೊಲ್ಪೆ, ಪ್ರವೀಣ್ ಆಚಾರ್ಯ ಸೇರಿದ ಇತರರು ಸೇರಿಕೊಂಡು ತಮ್ಮನ್ನು ತಳ್ಳಾಡಿ, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಬಳಿಕ ಪ್ರೆಸ್ ಕ್ಲಬ್ ಒಳಗೆ ಹೋಗಿದ್ದ ಅಬ್ದುಲ್ ಹಕೀಂರನ್ನು ಹೊರಗೆ ಬರದಂತೆ ಅಕ್ರಮವಾಗಿ ತಡೆಹಿಡಿದಿದ್ದಾರೆ ಎನ್ನಲಾಗಿದೆ. ಆರೋಪಿಗಳ ತಳ್ಳಾಟದಿಂದ ಗಾಯಗೊಂಡ ಅಬ್ದುಲ್ ಹಕೀಂ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 105/2026 ಕಲಂ : 127(2), 351(1), 351(2),351(3),352, 115r/w3(5) ರಂತೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!