Friday, June 5, 2026
spot_imgspot_img
spot_imgspot_img

ಪುತ್ತೂರು: ಯುವತಿಯ ಬಳಿ “ಬರ್ತೀಯಾ” ಎಂದು ಕೇಳಿದ ಯುವಕನ್ನು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ.!?

- Advertisement -
- Advertisement -

ಪುತ್ತೂರು: ಯುವಕನೋರ್ವ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ಸಮೀಪ ನಡೆದಿದೆ.

ಬಲ್ನಾಡು ಗ್ರಾಪಂ ವ್ಯಾಪ್ತಿಯ ಸಾಜ ಪನೆತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಅ.20ರಂದು ಸಂಜೆ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅದೇ ದಾರಿಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಾಜ ನಿವಾಸಿಯೋರ್ವ ಬರ್ತೀಯಾ ಎಂದು ಕೇಳಿದ್ದಾರೆ ಎನ್ನಲಾಗಿದ್ದು ಈ ವಿಷಯವನ್ನು ಯುವತಿಯು ತನ್ನ ಮನೆಯಲ್ಲಿ ತಿಳಿಸಿದ್ದಳು.

ಯುವಕನ ಸ್ಕೂಟರ್ ಪನೆತ್ತಡ್ಕ ಎಂಬಲ್ಲಿಗೆ ತಲುಪಿದಾಗ ಹಾಳಾಗಿದ್ದು ಸ್ಕೂಟರ್ ಅನ್ನು ಅಲ್ಲೇ ಬಿಟ್ಟು ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಇಂದು ಅ.21 ರಂದು ಬೆಳಿಗ್ಗೆ ಮೆಕ್ಯಾನಿಕ್‌ರವರನ್ನು ಕರೆದುಕೊಂಡು ಸ್ಕೂಟರ್ ನಿಲ್ಲಿಸಿದ್ದ ಪನೆತ್ತಡ್ಕಕ್ಕೆ ಬಂದಾಗ ಸ್ಥಳದಲ್ಲಿ ಸೇರಿದವರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ಇದೇ ವೇಳೆ ಕೆಲವರು ಆತನನಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ವಿದ್ಯುತ್ ಕಂಬದಿಂದ ಬಿಡಿಸಿಕೊಂಡು ಠಾಣೆಗೆ ಕರೆದೊಯ್ದಿದ್ದಾರೆ.ಯುವಕನ ಹೆಸರು ನಾಗರಾಜ್ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ.

- Advertisement -

Related news

error: Content is protected !!