Friday, May 17, 2024
spot_imgspot_img
spot_imgspot_img

ಹರ ಹರ ಶಂಭು… ಗಾಯಕಿ ಫರ್ಮಾನಿ ನಾಜ್ ಸೋದರ ಸಂಬಂಧಿಯ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಅವರ ಸೋದರ ಸಂಬಂಧಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೃತನನ್ನು ಮುಜಾಫರ್‌ನಗರದ ಖುರ್ಷಿದ್ ಎಂದು ಗುರುತಿಸಲಾಗಿದೆ. ಈತ ಹರ ಹರ ಶಂಭು.. ಗೀತೆಯನ್ನು ಸುಮಧುರವಾಗಿ ಹಾಡುವ ಮೂಲಕ ಪ್ರಖ್ಯಾತಿ ಗಳಿಸಿದ ಗಾಯಕಿ ಫರ್ಮಾನಿ ನಾಜ್ ಅವರ ಸೋದರ ಸಂಬಂಧಿ. ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ರವಿವಾರ ಘಟನೆ ನಡೆದಿದ್ದು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಖುರ್ಷಿದ್ ನನ್ನು ಮನಬಂದಂತೆ ಚಾಕುವಿನಿಂದ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ವಿಚಾರ ತಿಳಿದ ಸ್ಥಳೀಯರು ಯುವಕನ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಘಟನೆಗೆ ಸಂಬಂಧಿಸಿ ಯುವಕನ ಪೋಷಕರು ರತನ್‌ಪುರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

Insta: glacharyajewellers
Fb: glacharya
- Advertisement -

Related news

error: Content is protected !!