Friday, May 17, 2024
spot_imgspot_img
spot_imgspot_img

ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳ: ಯುವತಿ ಆತ್ಮಹತ್ಯೆ

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg
This image has an empty alt attribute; its file name is Bajaj-add-1024x718.jpg

ಇನ್ಸ್ಟಾಗ್ರಾಮ್ ಯುವತಿಯೋರ್ವಳು ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದ ಕೊಡಮಕ್ಕಿ ,ಹಾಡವಳ್ಳಿಯಲ್ಲಿ ನಡೆದಿದೆ. ಭಟ್ಕಳ ನಗರದಲ್ಲಿ ಖಾಸಗಿ ಕಚೇರಿಯೊಂದರಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈಕೆ ಕೆಲಸ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ಗೋವಾಳಿ ಎಂದು ಗುರುತಿಸಲಾಗಿದೆ.

ಈಕೆಗೆ ಕಿರುಕುಳವನ್ನು ನೀಡಿದ ಆರೋಪಿಯಾದ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಇನ್ಸ್ಟಗ್ರಾಮ್ನಲ್ಲಿ ಪರಿಚಯವಾಗಿ ನಂತರ ಗೆಳೆತನ ಮಾಡಿಕೊಂಡವನು ತಾನು ಖರ್ಚು ಮಾಡಿದ ಹಣ ಕೊಡುವಂತೆ ಹೇಳಿ ಕರೆ ಮಾಡಿ ಹೆದರಿಸಿ ಚಿತ್ರಹಿಂಸೆ ನೀಡಿ, ನಿನ್ನ ಅಶ್ಲೀಲ ಫೋಟೋಗಳನ್ನು ತಾನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇನೆ ಎಂದು ಹೇಳಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಯುವತಿ ಮನನೊಂದು ತನ್ನ ಹಳೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ತನ್ನ ಮಗಳ ಸಾವಿಗೆ ಗೋವರ್ಧನ ಮೊಗೇರ ಈತನ ಕಿರುಕುಳವೇ ಕಾರಣ ಎಂದು ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ಯುವತಿಯ ತಂದೆ ಮುತ್ತಯ್ಯ ಗೋವಾಳಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿ.ಎಸ್.ಐ. ಶ್ರೀಧರ ನಾಯ್ಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ವಿದ್ಯಾವಂತಳಾದ ಯುವತಿ ಆತ್ಮಹತ್ಯೆಗೆ ಮುಂದಾಗಿರುವುದು ಕುಟುಂಬದ ಆಕ್ರಂದನಕ್ಕೆ ಕಾರಣವಾಗಿದ್ದು ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!