Tuesday, May 7, 2024
spot_imgspot_img
spot_imgspot_img

ನಾಡ ಕಚೇರಿ ಉಪ ತಹಶೀಲ್ದಾರ್ ಕಿರುಕುಳ; ಡೆತ್ ನೋಟ್ ಬರೆದಿಟ್ಟು ಕಂಪ್ಯೂಟರ್ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಕಿರುಕುಳ ಆರೋಪ ಹಿನ್ನೆಲೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹರತಲೆ ಗ್ರಾಮದ ಹೆಚ್.ಎಸ್ ಪರಮೇಶ್ (36) ಎಂದು ಗುರುತಿಸಲಾಗಿದೆ.

ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಹೆಚ್.ಎಸ್ ಪರಮೇಶ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. ಭಾನುವಾರ ನಾಡಕಛೇರಿಗೆ ತೆರಳಿ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಆತನನ್ನು ಸ್ಥಳೀಯರು ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದ ವೇಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನನಗೆ ಕಳೆದ ಏಪ್ರಿಲ್ ತಿಂಗಳಿನಿಂದ ಸಂಬಳ ಆಗದೆ ಇರುವುದು ಅತ್ಯಂತ ಬೇಸರವಾಗಿ ಜೀವನ ನಡೆಸುವುದು ಒಂದು ಸಮಸ್ಯೆಯಾಗಿದೆ. ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ಎನ್‌.ಪಿ ಶಿವಕುಮಾರ್ ಅವರು ನನಗೆ ಮಾನಸಿಕ ಹಿಂಸೆ ಹಾಗೂ ಕೆಲವು ಅವರ ವೈಯಕ್ತಿಕ ದ್ವೇಷದಿಂದ ಮನನೊಂದು ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನಾನು ಒಬ್ಬ ಅಂಗವಿಕಲ ಎಂದು ಗೊತ್ತಿದ್ದರೂ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಾ ನನಗೆ ಮಾನಸಿಕ ಹಿಂಸೆ ಕೊಟ್ಟು, ನನ್ನನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ್ದಾರೆ. ನನ್ನ ಸಾವಿಗೆ ಹುಲ್ಲಹಳ್ಳಿ ನಾಡಕಚೇರಿಯ ಉಪ ತಹಶೀಲ್ದಾರ್ ಎನ್.ಪಿ ಶಿವಕುಮಾರ್ ಅವರೇ ನೇರ ಕಾರಣವಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಪರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!