Wednesday, February 28, 2024
spot_imgspot_img
spot_imgspot_img

ಪ್ರಾಂಶುಪಾಲರ ಕಿರುಕುಳ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ನಡೆದಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ (16) ಮೃತ ಬಾಲಕ.

ತನ್ನ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಆದಿತ್ಯ ಎನ್ ಸಿಜಿಸಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದು, ಪ್ರಾಂಶುಪಾಲೆ ಅನಿತಾ ಹೊಸಮನಿ ಅವರ ಕಿರುಕುಳ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ಧಾರೆ.

- Advertisement -

Related news

error: Content is protected !!