- Advertisement -
- Advertisement -
ಮಣಿಪಾಲ: ರಾತ್ರಿ ಹೊತ್ತು ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ನವೀನ್ ನಾಯ್ಕ್ (22) ಬಂಧಿತ ಆರೋಪಿ.
ಮಣಿಪಾಲದ ಅನಂತ್ ನಗರದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಆಧಾರಿತ ಹಾಸ್ಟೆಲ್‌ಗೆ ಸೆಪ್ಟೆಂಬರ್ 1 ರಂದು, ಸರಿಸುಮಾರು ಮುಂಜಾನೆ 2:15 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಪ್ರವೇಶಿಸಿ, ಹಾಸ್ಟೆಲ್ ಕೊಠಡಿಯ ಕಿಟಕಿಯ ಬಳಿ ಮಂಚದ ಮೇಲೆ ಮಲಗಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ್ದಾನೆ ಎಂದು ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದು ಖಚಿತ ಮಾಹಿತಿಯ ಮೇರೆಗೆ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.
- Advertisement -