Sunday, June 7, 2026
spot_imgspot_img
spot_imgspot_img

ಪುತ್ತೂರು: ಬಸ್ಸಿನಲ್ಲಿ ಕಿರುಕುಳ: ಟ್ವೀಟ್ ಆಧಾರಿಸಿ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು : ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ವೀಟ್ ಮೂಲಕ ದೂರಿದ್ದು, ಇದಕ್ಕೆ ಸ್ಪಂದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆಂದು ತಿಳಿದು ಬಂದಿದೆ.

ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದು. ಆ ಯುವಕ ಒಂದು ಚೀಟಿಯಲ್ಲಿ ಫೋನ್ ನಂಬರನ್ನು ಬರೆದು ಮಹಿಳೆಗೆ ನೀಡಿ ಬಳಿಕ ಸವಣೂರಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದನು. ಈ ಬಗ್ಗೆ ಟ್ವೀಟ್ ಮೂಲಕ ದೂರು ನೀಡಿದ್ದರು

ಈ ಬಗ್ಗೆ ಮಹಿಳೆಯಿಂದ ದೂರನ್ನು ಸ್ವೀಕರಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾದ್ದು, ಆರೋಪಿಯನ್ನು ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಯಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -

Related news

error: Content is protected !!