


ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ನಶೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಪ್ರತ್ಯೇಕ ಎರಡು ಘಟನೆ ಬಂಟ್ವಾಳ ತಾಲೂಕಿನಲ್ಲಿ ಇಂದು ನಡೆದಿದೆ.
ದಿನಾಂಕ 05.04.2023 ರಂದು ಬೆಳಿಗ್ಗೆ ಸಾರ್ವಜನಿಕ ಸ್ಥಳದಲ್ಲಿ, ಮಹಮ್ಮದ್ ಮುಸ್ತಫಾ ಕೆ (34) ಎಂಬ ವ್ಯಕ್ತಿಯು ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಘಟನೆ ಬಂಟ್ವಾಳ, ಪುದು ಗ್ರಾಮದ, ಕುಂಪನಮಜಲು ಎಂಬಲ್ಲಿ ನಡೆದಿದ್ದು,
ಈ ಬಗ್ಗೆ ಮಾಹಿತಿ ಬಂದ ಮೇರೆಗೆ, ಠಾಣಾ ಪಿ.ಎಸ್.ಐ ಹರೀಶ್ ಎಮ್ ಆರ್ ರವರು ಸಿಬ್ಬಂದಿಗಳೊಂದಿಗೆ ತೆರಳಿ, ನಶೆಯಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿ, ಆತನು ಮಾದಕವಸ್ತು ಸೇವಿಸಿರುವ ಬಗ್ಗೆ ಅನುಮಾನಗೊಂಡು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಆರೋಪಿಯು ಮಾದಕವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಆದ್ದರಿಂದ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 45/2024, ಕಲಂ: NARCOTIC DRUGS & PSYCHOTROPIC SUBSTANCES ACT 1985 (U/S-27(B) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ದಿನಾಂಕ 05.04.2023 ರಂದು ಬೆಳಿಗ್ಗೆ, ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್ ಜಬ್ಬರ್ ಎಂಬ ವ್ಯಕ್ತಿಯು ಮಾದಕವಸ್ತು ಸೇವಿಸಿ, ನಶೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಘಟನೆ ಬಂಟ್ವಾಳ ಸಜಿಪನಡು ಗ್ರಾಮದ, ಕುಂಟಲ್ ಗುಡ್ಡೆ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಬಂದ ಮೇರೆಗೆ, ಪಿ.ಎಸ್.ಐ ಮೂರ್ತಿ ರವರು ಸಿಬ್ಬಂದಿಗಳೊಂದಿಗೆ ತೆರಳಿ ನಶೆಯಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿ, ಆತನು ಮಾದಕವಸ್ತು ಸೇವಿಸಿರುವ ಬಗ್ಗೆ ಅನುಮಾನಗೊಂಡು, ವೈದ್ಯಕೀಯ ತಪಾಸಣೆಗೆಒಳಪಡಿಸಿದ್ದಾರೆ. ಆರೋಪಿಯು ಮಾದಕವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಆದ್ದರಿಂದ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 46/2024, ಕಲಂ :NARCOTIC DRUGS & PSYCHOTROPIC SUBSTANCES ACT 1985 (U/S-27(B) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.