Tuesday, June 16, 2026
spot_imgspot_img
spot_imgspot_img

ಬಂಟ್ವಾಳ: ರಾತ್ರಿ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು

- Advertisement -
- Advertisement -

ಬಂಟ್ವಾಳ : ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಸೆ.20 ರಂದು ರಾತ್ರಿ 10 ಗಂಟೆಯ ಬಳಿಕ ನೆರೆಮನೆಯ ವಿಶ್ವನಾಥ ಎಂಬಾತನು ಯುವತಿಯ ಮನೆ ಕಿಟಕಿಯ ಬಳಿ ನಿಂತು ಇಣುಕಿ ನೋಡುತ್ತಿದ್ದು, ಇದನ್ನು ಗಮನಿಸಿದ ಯುವತಿಯು ಜೋರಾಗಿ ಕಿರುಚಿದಾಗ ಅಲ್ಲಿಂದ ಓಡಿ ಹೋಗಿದ್ದಾನೆ ಎನ್ನಲಾಗಿದೆ.

ದೂರುದಾರರ ತಂದೆ ನಿಧನ ಹೊಂದಿದ್ದು, ತಾಯಿ ಹಾಗೂ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಇದ್ದಾರೆ. ಮನೆಯಲ್ಲಿ ಮಹಿಳೆಯರೇ ಇರುವ ಕಾರಣ ಈತ ರಾತ್ರಿ ವೇಳೆ ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಈತನನ್ನು ಬಂಧಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೋಲೀಸರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!