



ಉಡುಪಿ: ಫೇಸ್‌ಬುಕ್‌ನಲ್ಲಿ ಸೌದಿ ಅರೇಬಿಯಾದ ದೊರೆ ಹಾಗೂ ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ ಆರೋಪದಲ್ಲಿ ಸೌದಿಯಲ್ಲಿ ಬಂಧಿತರಾಗಿರುವ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಆ.18ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.
ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಎಲ್ಲಾü ವಿಧಾನಗಳು ಪೂರ್ಣಗೊಂಡಿದ್ದು, ಆ.17ರಂದು ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ಆ.18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ತನಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೇಸ್ ಬುಕ್‌ನಲ್ಲಿ ಸೌದಿ ದೊರೆ ಹಾಗೂ ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಹರೀಶ್ ಬಂಗೇರನನ್ನು ಸೌದಿ ಪೊಲೀಸರು 2019ರ ಡಿಸೆಂಬರ್ ನಲ್ಲಿ ಬಂಧಿಸಿದ್ದರು. ಈ ನಡುವೆ ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಸೌದಿ ದೊರೆ ಹಾಗೂ ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.


