- Advertisement -
- Advertisement -




ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ ಇಬ್ಬರು ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿದ್ಧಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೆಲ್ (33). ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಂ ಬಂಧಿತರು.
ಸುಹೈಲ್ ಹಾಗೂ ಝುಬೈರ್ ನೇರವಾಗಿ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದು. ಕಲಾಂ ನಕಲಿ ಪಾಸ್‌ಪೋರ್ಟ್ ಮಾಡುವಲ್ಲಿ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -