Wednesday, June 17, 2026
spot_imgspot_img
spot_imgspot_img

ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮೂಡಿ ಬಂದ ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್

- Advertisement -
- Advertisement -

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 7 ತಿಂಗಳ ತುಂಬು ಗರ್ಭಿಣಿಯಾಗಿರುವ ನಟಿ ಇದೀಗ ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೈ ತುಂಬಾ ಆಭರಣ ಧರಿಸಿ ಪಿಂಕ್ ಬಣ್ಣದ ಸೀರೆಯುಟ್ಟು ಮುದ್ದಾಗಿ ನಟಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಗಳಲ್ಲಿ ನಟಿ ಪೋಸ್ ನೀಡಿದ್ದಾರೆ. ವಿಭಿನ್ನ ರೀತಿಯಲ್ಲಿ ನಟಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಲುಕ್‌ ನೋಡಿ ಫ್ಯಾನ್ಸ್‌ ವಾವ್‌ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜು.2ರಂದು ಕೊಡಗು ಶೈಲಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾಯಿಯಾಗುತ್ತಿರುವ ಗುಡ್ ನ್ಯೂಸ್ ಅನ್ನು ನಟಿ ಹಂಚಿಕೊಂಡಿದ್ದರು. ಇಡೀ ಕುಟುಂಬ ಈ ಫೋಟೋಶೂಟ್‌ನಲ್ಲಿ ಭಾಗಿಯಾಗಿತ್ತು. ಹಲವು ವರ್ಷಗಳು ಪ್ರೀತಿಸಿ, ಆ.24ರಂದು ಹರ್ಷಿಕಾ ಮತ್ತು ಭುವನ್ ಜೋಡಿ ಹಸೆಮಣೆ ಏರಿದರು.

- Advertisement -

Related news

error: Content is protected !!