Tuesday, June 9, 2026
spot_imgspot_img
spot_imgspot_img

ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಪರಾರಿ!

- Advertisement -
- Advertisement -

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್.

ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!