- Advertisement -
- Advertisement -




ಹಾಸನ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಕುದುರುವಳ್ಳಿ ಗ್ರಾಮದ ಪ್ರಿಯಾಂಕ (28) ಹಾಗೂ ವಿನಿತ್ (7) ಎಂದು ಗುರುತಿಸಲಾಗಿದೆ. ಮಗನನ್ನು ಹಾಸನದ ಶಾಲೆಗೆ ಸೇರಿಸಲು ವರ್ಗಾವಣೆ ಪತ್ರ ತೆಗೆದುಕೊಂಡು ಹೋಗಲು ಇಬ್ಬರು ಬಂದಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.
ಆಟೋ ಚಾಲಕ ಅಬ್ಬಾಸ್ (52), ಬಾಲಕ ಸಾಗರ್ (13) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








