- Advertisement -
- Advertisement -



ಹಾಸನ: ಹಳೇಬೀಡು ಮತ್ತು ಹಾಸನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ಮೂರು ಲಕ್ಷ ಮೌಲ್ಯದ 2 ಕೆಜಿಗೂ ಅಧಿಕ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಸನ ನಗರದ ದೇವೇಗೌಡನಗರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ನಗರದ ಪೊಲೀಸರು ದಾಳಿ ಮಾಡಿದ್ದು, ಶ್ರೀನಗರ ನಿವಾಸಿ, ಆದಿಲ್ ಪಾಷಾ (29), ಅಂಬೇಡ್ಕರ್ ನಗರದ ನಿವಾಸಿ, ಮುಹಮ್ಮದ್ ತಬ್ರಿಜ್(29) ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳಿಂದ 1.301 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗೋವಿಂದ(40) ಎಂಬಾತ ಹಗರೆ-ಹಳೇಬೀಡು ರಸ್ತೆಯ ಬಂಡಾರಿಕಟ್ಟೆ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟಕ್ಕೆ ನಿಂತಿದ್ದು, ಆತನನ್ನು ಹಳೇಬೀಡು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಆತನಿಂದ 510 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
- Advertisement -








