Sunday, July 19, 2026
spot_imgspot_img
spot_imgspot_img

ಹಾಸನ: ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ಸಾವು!

- Advertisement -
- Advertisement -

ಹಾಸನ: ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ.ಮೃತನನ್ನು ಸಂಜು (16) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಸಂಜು ಹೊನ್ನಶೆಟ್ಟಿಹಳ್ಳಿಯ ಗ್ರಾಮದ ಗಿರೀಶ್ ಅವರ ಪುತ್ರ , ಈತ ಅಜ್ಜಿ ಮನೆಯಿಂದ ಕಾಲೇಜಿಗೆ ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಕ್ರಾಸ್ ಮಾಡುವಾಗ ವೇಗವಾಗಿ ಬಂದ ಕಾರು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!