- Advertisement -
- Advertisement -





ಹಾಸನ: ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ಘಟನೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ರಾಜಶೆಟ್ಟಿ(65) ಎಂದು ಗುರುತಿಸಲಾಗಿದೆ. ಇಂದು(ಏ.12) ಬೆಳಿಗ್ಗೆ ತೋಟಕ್ಕೆ ತೆರಳಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿದು ಸಾಯಿಸಿದೆ. ಮೃತದೇಹದ ಸ್ವಲ್ಪ ದೂರದಲ್ಲೇ ಕಾಡಾನೆ ಕೆಲಕಾಲ ನಿಂತುಕೊಂಡಿತ್ತು. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅರೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಾಡಾನೆ ಹಾವಳಿಯಿಂದ ಹೊಲ, ತೋಟಗಳಿಗೆ ತೆರಳಲು ಭಯವಾಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
- Advertisement -








